ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ ಬಿಜೆಪಿ, ಜೆಡಿಎಸ್ ಶಾಸಕರ ನಿಯೋಗ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ನಿಯೋಗ ವಿಧಾನಸೌಧದ ಕಚೇರಿಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿಯನ್ನ ಅರ್ಪಿಸಿದರು.
ಸಿಎಂ ಸಿದ್ದರಾಮಯ್ಯ ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಬೆಂಗಳೂರಿಗೆ ಅನುದಾನ ನೀಡಬೇಕು ಎಂಬುದು ಸೇರಿದಂತೆ ಹಲವು ವಿಷಯಗಳ ಕುರಿತು ಇಂದು ನಿಯೋಗವು ಮನವಿ ಸಲ್ಲಿಸಿದೆ.