BREAKING _ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು - ಜೂನ್ 1ರವರೆಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊನೆಗೂ ಬಿಗ್ ರಿಲೀಫ್ ಸಿಕ್ಕಿದೆ. ಸುಪ್ರೀಂಕೋರ್ಟ್ ಇಂದು ದೆಹಲಿ ಮುಖ್ಯಮಂತ್ರಿಗೆ ಮಧ್ಯಾಂತರ ಜಾಮೀನು ನೀಡಿ ಮಹತ್ವದ ಆದೇಶ ನೀಡಿದೆ.
ದೆಹಲಿ ಅಬಕಾರಿ ನೀತಿ ಅಕ್ರಮ ಪ್ರಕರಣದಲ್ಲಿ ಕಳೆದ ಮಾರ್ಚ್ 21ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿತ್ತು. ದೆಹಲಿಯ ಸಿಎಂ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೇಜ್ರಿವಾಲ್ ಅವರನ್ನು ಬಂಧಿಸಿ ತಿಹಾರ್ ಜೈಲಿನಲ್ಲಿರಿಸಿದ್ದರು.
ಆರೋಗ್ಯದ ಸಮಸ್ಯೆ ಹಾಗೂ ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಜಾಮೀನಿಗಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇಂದು ಕೇಜ್ರಿವಾಲ್ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ್ದ ಸುಪ್ರೀಂಕೋರ್ಟ್ ಷರತ್ತು ಬದ್ಧ ಮಧ್ಯಂತರ ಜಾಮೀನು ಕರುಣಿಸಿದೆ.
ದೆಹಲಿಯ ಅಬಕಾರಿ ನೀತಿ ಆಕ್ರಮ ಪ್ರಕರಣದಲ್ಲಿ ಬಂಧನದಲ್ಲಿದ್ದ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1ರವರೆಗೆ ಜಾಮೀನು ಮಂಜೂರು ಮಾಡಲಾಗಿದೆ. ಮೇ 25ರಂದು ದೆಹಲಿಯಲ್ಲಿ ಲೋಕಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ಜೂನ್ 1ರಂದು ದೇಶದಾದ್ಯಂತ ಕೊನೇ ಹಂತದ ಲೋಕಸಭಾ ಚುನಾವಣೆಗೆ ಮತದಾನ ನಿಗದಿಯಾಗಿದೆ. ದೆಹಲಿ ಸೇರಿದಂತೆ ದೇಶದಾದ್ಯಂತ ಚುನಾವಣಾ ಪ್ರಚಾರ ಮಾಡಲು ಸುಪ್ರೀಂಕೋರ್ಟ್ ಅನುಮತಿ ನೀಡಿದ್ದು, ಜೂನ್ 1ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.