ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ 6 ದಿನ ಇ.ಡಿ ಕಸ್ಟಡಿಗೆ

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣದ ಆರೋಪಿ ಆಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ. ಸದ್ಯ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯವು ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು 6 ದಿನಗಳ ಕಾಲ ಜಾರಿ ನಿರ್ದೇಶನಾಲಯ (ಈಡಿ) ಕಸ್ಟಡಿಗೆ ಒಪ್ಪಿಸಿದೆ.
ರೋಸ್ ಅವೆನ್ಯೂ ನ್ಯಾಯಾಲಯ ಪ್ರಕರಣದಲ್ಲಿ ಕೇಜ್ರಿವಾಲ್‌ರನ್ನು ಮುಖ್ಯ ಆರೋಪಿ ಎಂದು ವಾದಿಸಿದ ಜಾರಿ ನಿರ್ದೇಶನಾಲಯ ಪರ ವಕೀಲರು, ಪ್ರಕರಣದ ವಿಚಾರಣೆಗಾಗಿ ಕೇಜ್ರಿವಾಲ್‌ರನ್ನು ಇ.ಡಿ ಕಸ್ಟಡಿಗೆ 10 ದಿನಗಳ ಕಾಲ ನೀಡುವಂತೆ ಕೋರಿದ್ದರು. ಮುಂದಿನ ವಿಚಾರಣೆಗಾಗಿ ಕೇಜ್ರಿವಾಲ್‌ರನ್ನು ಮಾರ್ಚ್ 28ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ.