ಬ್ರೇಕಿಂಗ್ : ಉಪ ಸಭಾಪತಿ ಮಾಮನಿ ಇನ್ನಿಲ್ಲ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಉಪಸಭಾಪತಿ ಆನಂದ ಮಾಮನಿ(56)ಶನಿವಾರ ಮಧ್ಯರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಆನಂದ್ ಮಾಮನಿ ಅವರು ಚಿಕಿತ್ಸೆ ಫಲಕಾರಿಯಾಗದೇ
ವಿಧಿವಶರಾಗಿದ್ದಾರೆ.
ಇನ್ನು ಬೆಳಗಾವಿ ಜಿಲ್ಲೆ ಸವದತ್ತಿ ಕ್ಷೇತ್ರದ ಶಾಸಕರಾಗಿದ್ದ ಮಾಮನಿ ಕ್ಯಾನ್ಸರ್ ನಿಂದ ಬಳಸಲುತ್ತಿದ್ದು ಕಳೆದ ತಿಂಗಳು ಚನ್ನೈನಲ್ಲಿ ಚಿಕಿತ್ಸೆ ಪಡೆದಿದ್ದರು. ನಂತರ ಆರೋಗ್ಯ ಚೇತರಿಸಿಕೊಂಡ ಹಿನ್ನಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಆನಂದ್ ಮಾಮನಿ ಅವರ ಪಾರ್ಥಿವ ಶರೀರವನ್ನು ಅಂಬ್ಯುಲೆನ್ಸ್ ಮೂಲಕ ಸವದತ್ತಿಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದ್ದು, ಇದಕ್ಕೆ ಎಲ್ಲಾ ಸಿದ್ಧತೆಗಳು ನಡೆಯುತ್ತಿವೆ. ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಭಾನುವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.