ಧಾರವಾಡ: ಓರ್ವ ಪಕ್ಷೇತರ ಅಭ್ಯರ್ಥಿ ನಾಮಪತ್ರ ತಿರಸ್ಕೃತ

ಧಾರವಾಡ: ಓರ್ವ ಪಕ್ಷೇತರ ಅಭ್ಯರ್ಥಿ ನಾಮಪತ್ರ ತಿರಸ್ಕೃತ

ಧಾರವಾಡ: ಕರ್ನಾಟಕ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಧಾರವಾಡ ಮತಕ್ಷೇತ್ರದ ಚುನಾವಣೆಗೆ ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳ ಪರಿಶೀಲನೆ ಕಾರ್ಯ ಇಂದು ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿತು. ನಾಮಪತ್ರ ಸಲ್ಲಿಸಿದ್ದ 12 ಅಭ್ಯರ್ಥಿಗಳ ಪೈಕಿ ಪಕ್ಷೇತರ ಅಭ್ಯರ್ಥಿ ನಾಗೇಶಪ್ಪ ಶಿವರುದ್ರಪ್ಪ ಪಡೆಪ್ಪನವರ ಅವರು ಪ್ರಮಾಣಪತ್ರದ (ಅಫಿದವಿಟ್) ಎಲ್ಲ ಕಾಲಂ ಗಳನ್ನು ಭರ್ತಿ ಮಾಡದೇ ಇರುವುದರಿಂದ ಅವರ ನಾಮಪತ್ರ ತಿರಸ್ಕೃತವಾಗಿದೆ. ಅಂತಿಮವಾಗಿ 11 ಜನ ಉಮೇದುವಾರರ ಉಮೇದುವಾರಿಕೆ ಸ್ವೀಕೃತವಾಗಿದೆ ಎಂದು ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.)