ಧಾರವಾಡ: ಜಿಲ್ಲೆಯಲ್ಲಿ ಇಂದು ದಾಖಲೆಯ 648 ಜನರಿಗೆ ಸೋಂಕು ದೃಢ

ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಾಖಲೆಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 648 ಜನರಿಗೆ ಕೊರೊನಾ ಕಾಣಿಸಿಕೊಂಡಿದ್ದು, ಈವರೆಗೂ ಒಟ್ಟು 63,903 ಜನರಿಗೆ ಸೋಂಕು ದೃಢಪಟ್ಟಿದೆ.
ಸೋಂಕಿನಿಂದ ಇಂದು 76 ಮಂದಿ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಈವರೆಗೂ 60,656 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 1,325 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 1,920 ಸಕ್ರಿಯ ಪ್ರಕರಣಗಳಿವೆ.