ಧಾರವಾಡ: ಎಸ್‌ಡಿಎಂ ಸುತ್ತಲಿನ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ

ಧಾರವಾಡ: ಎಸ್‌ಡಿಎಂ ಸುತ್ತಲಿನ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ

ಧಾರವಾಡ: ಧಾರವಾಡದ ಎಸ್‌ಡಿಎಂ ವೈದ್ಯಕೀಯ ಕಾಲೇಜು ಹಾಗೂ ಹಾಸ್ಟೆಲ್‌ನಲ್ಲಿ ಕೊರೊನಾ ಸ್ಪೋಟಗೊಂಡ ಹಿನ್ನೆಲೆಯಲ್ಲಿ ಎಸ್‌ಡಿಎಂ ಸುತ್ತ 500 ಮೀಟರ್ ವ್ಯಾಪ್ತಿಯೊಳಗಿರುವ ಎಲ್ಲಾ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ. ಕೊರೊನಾ ವ್ಯಾಪಿಸಬಾರದು ಎಂಬ ಉದ್ದೇಶದಿಂದ ಜಿಲ್ಲಾಧಿಕಾರಿಗಳು ಈ ನಿರ್ಧಾರ ಕೈಗೊಂಡಿದ್ದಾರೆ. ಎಸ್‌ಡಿಎಂ ಆಸ್ಪತ್ರೆಗೆ ಅನಗತ್ಯ ಭೇಟಿ, ರೋಗಿಗಳ ಅಟೆಂಡರ್‌ಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.