ಫೆ.24 ರಂದು ಮುಖ್ಯಮಂತ್ರಿಗಳ ಧಾರವಾಡ ಜಿಲ್ಲಾ ಪ್ರವಾಸ

ಧಾರವಾಡ : ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಫೆಬ್ರವರಿ 24 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಮಧ್ಯಾಹ್ನ 2.30 ಕ್ಕೆ ಹಾಸನ ಜಿಲ್ಲೆಯ ಬಾಣಾವರದಿಂದ ಹೆಲಿಕಾಪ್ಟರ್ ಮೂಲಕ ನವಲಗುಂದಕ್ಕೆ ಆಗಮಿಸುವರು.
ಸಂಜೆ 4 ಗಂಟೆಗೆ ಮಾಡೆಲ್ ಹೈಸ್ಕೂಲ್ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ವತಿಯಿಂದ ನವಲಗುಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ, ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಹಕ್ಕುಪತ್ರಗಳ ವಿತರಣೆ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 6 ಗಂಟೆಗೆ ನವಲಗುಂದ ರಸ್ತೆಯ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದು, ನಂತರ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.