ಧಾರವಾಡ: ಪದವೀಧರ ಕ್ಷೇತ್ರದ ಚುನಾವಣೆ: ಶಸ್ತ್ರಾಸ್ತ್ರಗಳ ಠೇವಣಿಗೆ ಡಿಸಿ ಆದೇಶ

ಧಾರವಾಡ: ಪದವೀಧರ ಕ್ಷೇತ್ರದ ಚುನಾವಣೆ: ಶಸ್ತ್ರಾಸ್ತ್ರಗಳ ಠೇವಣಿಗೆ ಡಿಸಿ ಆದೇಶ

ಧಾರವಾಡ: ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ ಘೋಷಣೆಯಾಗಿದ್ದು, ಸೆ.22 ರಿಂದ ನೀತಿ ಸಂಹಿತೆ ಜಾರಿಯಲ್ಲಿದೆ. ಶಸ್ತ್ರಾಸ್ತ್ರ ಪರವಾನಗಿದಾರರು ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಯಲ್ಲಿ ಠೇವಣಿ ಇಡಬೇಕು ಎಂದು ಧಾರವಾಡ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಆದೇಶ ಹೊರಡಿಸಿದ್ದಾರೆ. 

ಪರವಾನಗಿದಾರರು ಶಸ್ತ್ರಾಸ್ತ್ರಗಳನ್ನು ಠೇವಣಿ ಇಟ್ಟು, ಸ್ವೀಕೃತಿ ಪತ್ರ ಪಡೆದುಕೊಳ್ಳಬೇಕು. ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಶಸ್ತ್ರಾಸ್ತ್ರಗಳನ್ನು ವಾಪಸ್ ಪಡೆಯಬೇಕು. ಬ್ಯಾಂಕ್‌ಗಳು, ಅರೆ ಸರ್ಕಾರಿ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳು ಭದ್ರತೆಗಾಗಿ ಶಸ್ತ್ರಾಸ್ತ್ರ ಹೊಂದಿರುವವರು ಹಾಗೂ ಜೀವ ರಕ್ಷಣೆಗಾಗಿ ಶಸ್ತ್ರಾಸ್ತ್ರ ಇಟ್ಟುಕೊಳ್ಳಬೇಕಾದ ಅನಿವಾರ್ಯ ಇರುವ ಪರವಾನಗಿದಾರರು ಪೊಲೀಸ್ ಠಾಣೆಯಲ್ಲಿ 7 ದಿನಗಳೊಳಗೆ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಬೇಕು. ಸ್ಕ್ರೀನಿಂಗ್ ಸಮಿತಿ ಮುಂದೆ ಅರ್ಜಿ ಮಂಡಿಸಬೇಕು. ಅರ್ಜಿ ಪರಿಶೀಲಿಸಿ ಸಮಿತಿ ಕ್ರಮ ವಹಿಸುತ್ತದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಆದೇಶದಲ್ಲಿ ತಿಳಿಸಿದ್ದಾರೆ.