ಧಾರವಾಡ: ಗೆಲುವು ಸಾಧಿಸಿದ ಪ್ರದೀಪ್ ಶೆಟ್ಟರ್, ಸಲೀಂ ಅಹ್ಮದ್

ಧಾರವಾಡ: ಧಾರವಾಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ನ ಎರಡು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾದ ಸಲೀಂ ಅಹ್ಮದ್ ಅವರು 3334 ಹಾಗೂ ಬಿಜೆಪಿ ಅಭ್ಯರ್ಥಿಯಾದ ಪ್ರದೀಪ್ ಶೆಟ್ಟರ್ ಅವರು 2497 ಮೊದಲ ಪ್ರಾಶ್ಯಸ್ತ್ಯದ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಈ ಎರಡೂ ವಿಧಾನ ಪರಿಷತ್ ಕ್ಷೇತ್ರಗಳನ್ನು ಕಾಂಗ್ರೆಸ್ ಹಾಗೂ ಬಿಜೆಪಿ ಸಮನಾಗಿ ಹಂಚಿಕೊಂಡಿವೆ. ಆದರೆ, ಬಿಜೆಪಿಗಿಂತ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಅವರು ಹೆಚ್ಚು ಮತಗಳನ್ನು ಪಡೆದಿದ್ದು ಇಲ್ಲಿ ಗಮನಾರ್ಹ.