ಧಾರವಾಡ: ಪಿಯುಸಿ, ಪದವಿ ಕಾಲೇಜುಗಳಿಗೂ ನಾಳೆ ರಜೆ

ಧಾರವಾಡ: ಪಿಯುಸಿ, ಪದವಿ ಕಾಲೇಜುಗಳಿಗೂ ನಾಳೆ ರಜೆ

ಧಾರವಾಡ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಾಲಾ ಮಕ್ಕಳ ಹಿತದೃಷ್ಟಿಯಿಂದ ನಾಳೆ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳಿಗೆ ರಜೆ ಘೋಷಿಸಿದ ಬೆನ್ನಲ್ಲೇ ಈ ರಜೆಯನ್ನು ಪಿಯುಸಿ ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳಿಗೂ ವಿಸ್ತರಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. 

ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪಿಯುಸಿ ಮತ್ತು ಪದವಿ ಕಾಲೇಜುಗಳಿಗೆ ನಾಳೆ ಒಂದು ದಿನದ ರಜೆ ಘೋಷಿಸಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಇಂದು ಸಂಜೆ ಆದೇಶಿಸಿದ್ದಾರೆ.