ಧಾರವಾಡ: ಗೃಹಜ್ಯೋತಿ ಅರ್ಜಿ ಸಲ್ಲಿಸಲು ಗ್ರಾಮ ಪಂಚಾಯ್ತಿ-ಬಾಪೂಜಿ ಸೇವಾ ಕೇಂದ್ರದಲ್ಲೂ ಅವಕಾಶ

ಧಾರವಾಡ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಜ್ಯೋತಿ ಯೋಜನೆಯ ನೋಂದಣಿಗಾಗಿ ಅರ್ಜಿಗಳನ್ನು ಗ್ರಾಮೀಣ ಪ್ರದೇಶದ ಫಲಾನುಭವಿಗಳು ಜಿಲ್ಲೆಯ ಗ್ರಾಮ ಪಂಚಾಯತ್‌ಗಳಲ್ಲಿನ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ. ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು ಅರ್ಜಿಗಳನ್ನು ಸಲ್ಲಿಸಲು ಪ್ರತಿ ಅರ್ಜಿಗೆ 20 ರೂಪಾಯಿಗಳ ಶುಲ್ಕವನ್ನು ನಿಗದಿಪಡಿಸಲಾಗಿದೆ. ಯಾವುದೇ ಹೆಚ್ಚುವರಿ ಶುಲ್ಕ ಸಂದಾಯ ಮಾಡದೇ ಫಲಾನುಭವಿಗಳು ತಮ್ಮ ಸ್ಥಳೀಯ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಗೃಹ ಜ್ಯೋತಿ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಸೂಚಿಸಲಾಗಿದೆ. ಗ್ರಾಮ ಪಂಚಾಯ್ತಿಗಳಿಗೆ ಸೇವಾಸಿಂಧು ಪೋರ್ಟಲ್ ಲಾಗಿನ್‍ಗಳನ್ನು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.