ಧಾರವಾಡ: ಸೆಪ್ಟೆಂಬರ್ 13ಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಧ್ಯಕ್ಷತೆಯಲ್ಲಿ ದಿಶಾ ಸಮಿತಿ ಸಭೆ

ಧಾರವಾಡ: ಸೆಪ್ಟೆಂಬರ್ 13ಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಧ್ಯಕ್ಷತೆಯಲ್ಲಿ ದಿಶಾ ಸಮಿತಿ ಸಭೆ

ಧಾರವಾಡ: ದಿಶಾ ಸಮಿತಿ ಅಧ್ಯಕ್ಷರಾದ ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಹ್ಲಾದ ಜೋಶಿ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ (ದಿಶಾ) ಸಭೆಯನ್ನು ಸೆಪ್ಟೆಂಬರ್ 13 ರಂದು ಮಧ್ಯಾಹ್ನ 3 ಗಂಟೆಗೆ ಧಾರವಾಡ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಆಯೋಜಿಸಲಾಗಿದೆ.   

ಕೇಂದ್ರ ಪುರಸ್ಕೃತ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಜಿಲ್ಲೆಯ ಎಲ್ಲ ಇಲಾಖೆಗಳ ಅಧಿಕಾರಿಗಳು ಸಭೆಗೆ ಪ್ರಗತಿ ವರದಿಯೊಂದಿದೆ ಭಾಗವಹಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ, ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.