ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್ : 3% ತುಟ್ಭಿ ಭತ್ಯೆ ಹೆಚ್ಚಳ

ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್ : 3% ತುಟ್ಭಿ ಭತ್ಯೆ ಹೆಚ್ಚಳ

ಬೆಂಗಳೂರು : ದೀಪಾವಳಿಗೆ ಮುನ್ನ ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಿಸಿದ ಸರ್ಕಾರ ಹಬ್ಬಕ್ಕೆ ಗಿಫ್ಟ್ ಕೊಟ್ಟಿದೆ. ಶೇ. 21.50 ರಿಂದ ಶೇ. 24.50 ಕ್ಕೆ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದೆ ಜೊತೆಗೆ ಜುಲೈ 1 ರಿಂದಲೇ ಜಾರಿಗೆ ಬರುವಂತೆ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಆದೇಶಿಸಲಾಗಿದೆ. ತುಟ್ಟಿ ಭತ್ಯೆ ಹೆಚ್ಚಳದಿಂದ ನಿವೃತ್ತ ಸರ್ಕಾರಿ ನೌಕರರಿಗೂ ಅನುಕೂಲವಾಗಲಿದೆ.