ಬೆಂಗಳೂರು: ಸುರಂಗ ರಸ್ತೆ ನಿರ್ಮಾಣ ಸಂಬಂಧ ಉನ್ನತ ಅಧಿಕಾರಿಗಳ ಜೊತೆ ಡಿಕೆಶಿ ಸಭೆ

ಬೆಂಗಳೂರು: ಬೆಂಗಳೂರಲ್ಲಿ ಸುರಂಗ ರಸ್ತೆ ನಿರ್ಮಾಣ ಸಂಬಂಧ ಡಿಸಿಎಂ ಡಿ ಕೆ ಶಿವಕುಮಾರ್ ಅವರು ರಾಜ್ಯ ಸರಕಾರದ ಉನ್ನತ ಅಧಿಕಾರಿಗಳ ಜತೆ ವಿಧಾನಸೌಧದಲ್ಲಿ ಶನಿವಾರ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್, ಮುಖ್ಯ ಆಯುಕ್ತ ಮಹೇಶ್ವರ ರಾವ್, ಡಿಜಿಪಿ ಎಂ ಎ ಸಲೀಂ, ಬಿ ಡಿ ಎ ಆಯುಕ್ತ ಜಯರಾಮ್, ಬಿ ಎಂ ಆರ್ ಡಿ ಎ ಆಯುಕ್ತ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.