ವೈದ್ಯರ ಪ್ರತಿಭಟನೆ - ರಜೆ ಮಂಜೂರು ಮಾಡದಂತೆ ಸರಕಾರ ಆದೇಶ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಾಳೆ ಆಗಸ್ಟ್ 17ರಂದು ರಾಜ್ಯಾದ್ಯಂತ ಸರಕಾರಿ ವೈದ್ಯರು ಮುಷ್ಕರ ಹಾಗೂ ಪ್ರತಿಭಟನೆಗೆ ನಿರ್ಧರಿಸಿದ್ದಾರೆ. ಪ್ರತಿಭಟನೆ ಹಿನ್ನೆಲೆ ಹೊರ ರೋಗಿಗಳ ಸೇವೆ(OPD) ಬಂದ್ ಆಗಲಿದೆ. ಹೀಗಾಗಿ ರಾಜ್ಯಾದ್ಯಂತ ಎಲ್ಲ ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ರಜೆ ಮಂಜೂರು ಮಾಡದಂತೆ ಸರ್ಕಾರ ಆದೇಶಿಸಿದೆ.
ದಿನಾಂಕ: 17-08-2024 ರಂದು ರಾಜ್ಯಾದ್ಯಂತ ಖಾಸಗಿ ಹಾಗೂ ಸರ್ಕಾರಿ ಸಂಸ್ಥೆಗಳಲ್ಲಿ ವೈದ್ಯಕೀಯ ಸೇವೆಯು ವ್ಯತ್ಯಯವಾಗಿ ಸಾರ್ವಜನಿಕ ಆರೋಗ್ಯ ಸೇವೆಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಹೀಗಾಗಿ ಎಲ್ಲ ಜಿಲ್ಲೆಗಳ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಜಿಲ್ಲಾ ಶಸ್ತ್ರ ಚಿಕಿತ್ಸಕರು ಮತ್ತು ಎಲ್ಲಾ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳು, ಅಗತ್ಯ ಮುನ್ನೆಚ್ಚರಿಕಾ ಕ್ರಮವಹಿಸಿ ಸಾರ್ವಜನಿಕ ತುರ್ತು ವೈದ್ಯಕೀಯ ಸೇವೆಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಬೇಕು. ಪ್ರತಿಭಟನೆಯ ದಿನ ಯಾವುದೇ ವೈದ್ಯರಿಗೆ ರಜೆ ಮಂಜೂರು ಮಾಡದಂತೆ ಸೂಚಿಸಿದ್ದಾರೆ.