ನಾಮಪತ್ರ ಸಲ್ಲಿಸಿದ ದ್ರೌಪದಿ ಮುರ್ಮು

ನಾಮಪತ್ರ ಸಲ್ಲಿಸಿದ ದ್ರೌಪದಿ ಮುರ್ಮು

ನವದೆಹಲಿ : ರಾಷ್ಟ್ರಪತಿ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇಂದು ಎನ್ ಡಿಎ ಅಭ್ಯರ್ಥಿಯಾಗಿ ಒಡಿಶಾ ಮೂಲದ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಮುಖಂಡರ ನೇತೃತ್ವದಲ್ಲಿ ಮುರ್ಮು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. 

ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ಇನ್ನು ಮುರ್ಮ ಅವರು ರಾಷ್ಟ್ರಪತಿಯಾಗಿ ಆಯ್ಕೆಯಾದರೆ ದೇಶದ ಬುಡಕಟ್ಟು ಜನಾಂಗದ ಮೊದಲ ಮಹಿಳಾ ರಾಷ್ಟ್ರಪತಿ ಹಾಗೂ ದೇಶದ ಎರಡನೇ ಮಹಿಳಾ ರಾಷ್ಟ್ರಪತಿ ಎನಿಸಿಕೊಳ್ಳಲಿದ್ದಾರೆ. ಇನ್ನು ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ.