ಕಾಂಗ್ರೆಸ್ ನೇತೃತ್ವದ ಮೇಕೆದಾಟು ಪಾದಯಾತ್ರೆಗೆ ಚಾಲನೆ

ಕಾಂಗ್ರೆಸ್ ನೇತೃತ್ವದ ಮೇಕೆದಾಟು ಪಾದಯಾತ್ರೆಗೆ ಚಾಲನೆ

ರಾಮನಗರ: ಮೇಕೆದಾಟು ಅಣೆಕಟ್ಟು ಯೋಜನೆಗೆ ಒತ್ತಾಯಿಸಿ ಕಾಂಗ್ರೆಸ್ ನೇತೃತ್ವದ ಎರಡನೇ ಹಂತದ ಪಾದಯಾತ್ರೆಗೆ ಚಾಲನೆ ದೊರೆತಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಚಾಲನೆ ನೀಡಿದ್ದಾರೆ. ನಗರದ ಟಿ.ಆರ್ ಮಿಲ್‌ ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ನಡೆದಿದ್ದು ಇಲ್ಲಿಂದಲೇ ಪಾದಯಾತ್ರೆ ಆರಂಭವಾಗಲಿದೆ. ಆದಿಚುಂಚನಗಿರಿ ಶಾಖಾ‌ ಮಠದ ಅನ್ನದಾನೇಶ್ವರನಾಥ ಸ್ವಾಮೀಜಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ‌ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.‌ ಹರಿಪ್ರಸಾದ್, ಸೇರಿದಂತೆ ಕಾಂಗ್ರೆಸ್‌ ಪಕ್ಷದ ರಾಜ್ಯ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.