ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಪ್ರಬಲ ಭೂಕಂಪ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಪ್ರಬಲ ಭೂಕಂಪ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಇಂದು ರಾತ್ರಿ ಇದ್ದಕ್ಕಿದ್ದಂತೆ ಭೂಮಿ ಕಂಪಿಸಲು ಆರಂಭಿಸಿದೆ. ಮನೆಯಲ್ಲಿದ್ದ ನಿವಾಸಿಗಳು ಹೊರಗೆ ಓಡಿ ಬಂದಿದ್ದಾರೆ. ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದವರೂ ಹೊರಗೆ ಬಂದಿದ್ದಾರೆ. 

 

ಕೆಲ ಕ್ಷಣಗಳ ಕಾಲ ಭೂಮಿ ಕಂಪಿಸಿದೆ. ದೆಹಲಿ, ನೋಯ್ಡಾ, ಗುರುಗಾಂವ್, ಗಾಜಿಯಾದಾಬ್ ಸೇರಿದಂತೆ ರಾಷ್ಟ್ರ ರಾಜಧಾನಿ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಭೂಮಿ ಕಂಪಿಸಿದೆ. ಇನ್ನು ಜಮ್ಮು ಮತ್ತು ಕಾಶ್ಮೀರದಲ್ಲೂ ಭೂಮಿ ಕಂಪಿಸಿದೆ. ಇದೀಗ ಭಾರತದಲ್ಲಿ ಆತಂಕ ಹೆಚ್ಚಾಗಿದೆ. ಉತ್ತರ ಭಾರತದ ಹಲವು ಭಾಗಗಳಲ್ಲಿ ಭೂಮಿ ಕಂಪಿಸಿದೆ. 

 

ಉತ್ತರ ಭಾರತ, ಚೀನಾ, ಆಫ್ಘಾನಿಸ್ತಾನ, ಪಾಕಿಸ್ತಾನ ಸೇರಿ ಹಲವು ರಾಷ್ಟ್ರಗಳಲ್ಲಿ ಭೂಮಿ ಕಂಪಿಸಿದೆ. ಪ್ರಬಲ ಭೂಕಂಪ ಇದಾಗಿದ್ದು, ರೆಕ್ಟರ್ ಮಾಪಕದಲ್ಲಿ ತೀವ್ರತೆ 7.7 ತನಕ ದಾಖಲಾಗುವ ಸಾಧ್ಯತೆ ಎಂದು ಅಂದಾಜಿಸಲಾಗಿದೆ.