ಹರಿಯಾಣದ ರೋಹ್ಟಕ್ ಜಿಲ್ಲೆಯಲ್ಲಿ 3.2 ತೀವ್ರತೆಯ ಭೂಕಂಪ

ರೋಹ್ಟಕ್ (ಹರಿಯಾಣ): ಇಂದು ಶನಿವಾರ ಮುಂಜಾನೆ ಹರಿಯಾಣದ ರೋಹ್ಟಕ್ ಜಿಲ್ಲೆಯಲ್ಲಿ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಶನಿವಾರ ಮುಂಜಾನೆ 3.57ಕ್ಕೆ ಹರಿಯಾಣದ ರೋಹ್ಟಕ್ ಜಿಲ್ಲೆಯಲ್ಲಿ ಭೂಮಿಯಿಂದ 10 ಕಿಮೀ ಆಳದಲ್ಲಿ 3.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಭೂಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜೂನ್ 6ರಂದು ಹರಿಯಾಣದ ಜಜ್ಜರ್‌ನಲ್ಲಿ ಭೂಮಿಯಿಂದ 12 ಕಿಮೀ ಆಳದಲ್ಲಿ 2.5 ತೀವ್ರತೆಯ ಭೂಕಂಪ ಸಂಭವಿಸಿತ್ತು