15 ರಾಜ್ಯಗಳ 56 ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ಘೋಷಣೆ

15 ರಾಜ್ಯಗಳ 56 ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ಘೋಷಣೆ
15 ರಾಜ್ಯಗಳ 56 ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ಘೋಷಣೆ

ಕೇಂದ್ರ ಚುನಾವಣಾ ಆಯೋಗವು 15 ರಾಜ್ಯಗಳ 56 ರಾಜ್ಯಸಭೆ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಸುವುದಾಗಿ ಇಂದು ತಿಳಿಸಿದೆ.  

ನಾಮಪತ್ರ ಸಲ್ಲಿಸಲು ಫೆ.15 ರಂದು ಕೊನೆಯ ದಿನಾಂಕವಾಗಿದ್ದು, ಫೆ.27ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ.

ಚುನಾವಣೆಯು ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ, ಪಶ್ಚಿಮ ಬಂಗಾಳ, ಮಧ್ಯ ಪ್ರದೇಶ, ಗುಜರಾತ್, ಆಂಧ್ರ ಪ್ರದೇಶ, ತೆಲಂಗಾಣ, ರಾಜಸ್ಥಾನ, ಕರ್ನಾಟಕ, ಉತ್ತರಾಖಂಡ, ಛತ್ತೀಸ್ಗಢ,ಒಡಿಶಾ, ಹರ್ಯಾಣ ಹಾಗೂ ಹಿಮಾಚಲಾ ಪ್ರದೇಶದಲ್ಲಿ ನಡೆಯಲಿದೆ.

ರಾಜ್ಯಸಭೆ ಸದಸ್ಯರ ಅವಧಿಯು 6 ವರ್ಷಗಳಾಗಿದ್ದು, ಶಾಶ್ವತ ಸದನವಾಗಿರುವ ರಾಜ್ಯಸಭೆಯಲ್ಲಿ ಮೂರನೇ ಎರಡರಷ್ಟು ಸದಸ್ಯರು ಪ್ರತಿ ಎರಡು ವರ್ಷಗಳಿಗೊಮ್ಮೆ ನಿವೃತ್ತರಾಗುತ್ತಾರೆ.

13 ರಾಜ್ಯಗಳ 50 ರಾಜ್ಯಸಭಾ ಸದಸ್ಯರು ಏಪ್ರಿಲ್ 2 ರಂದು ನಿವೃತ್ತರಾಗಲಿದ್ದು, ಎರಡು ರಾಜ್ಯಗಳ ಉಳಿದ ಆರು ಮಂದಿ ಏಪ್ರಿಲ್ 3 ರಂದು ನಿವೃತ್ತರಾಗಲಿದ್ದಾರೆ.

ರಾಜ್ಯಸಭೆಯ ಸದಸ್ಯರನ್ನು ರಾಜ್ಯ ವಿಧಾನಸಭೆಯ ಸದಸ್ಯರು ಆಯ್ಕೆ ಮಾಡುತ್ತಾರೆ. ವರ್ಗಾಯಿಸುವ ಒಂದು ಮತದ ಮೂಲಕ ಅನುಪಾತದ ಪ್ರಾತಿನಿಧ್ಯದ ಮೇಲೆ ವಿಧಾನಸಭಾ ಸದಸ್ಯರು ಆಯ್ಕೆ ಮಾಡುತ್ತಾರೆ.