ಆಗಷ್ಟ 17 ರಂದು ಹು-ಧಾ ಮಹಾನಗರ ಪಾಲಿಕೆಯ ವಿವಿಧ ಸ್ಥಾಯಿ ಸಮಿತಿಗಳಿಗೆ ಚುನಾವಣೆ

ಧಾರವಾಡ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 22ನೇ ಅವಧಿಯ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳಿಗೆ ಸದಸ್ಯರನ್ನು ಚುನಾಯಿಸಲು ಆಗಸ್ಟ್ 17 ರಂದು ಚುನಾವಣೆ ಜರುಗಿಸಲಾಗುವುದು ಎಂದು ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಎಸ್.ಬಿ. ಶೆಟ್ಟೆಣ್ಣವರ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳಿಗೆ ಆಗಸ್ಟ್ 17 ರಂದು ಮಧ್ಯಾಹ್ನ 1 ಗಂಟೆಗೆ ಧಾರವಾಡದ ಪಾಲಿಕೆಯ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಭಾಭವನದಲ್ಲಿ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಆಗಸ್ಟ್ 17 ರಂದು ಬೆಳಿಗ್ಗೆ 9 ಗಂಟೆಯಿಂದ 11 ರ ವರೆಗೆ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳಿಗೆ ನಾಮಪತ್ರ ಸ್ವೀಕರಿಸಲಾಗುವುದು. ಮಧ್ಯಾಹ್ನ 1 ಗಂಟೆಗೆ ಸಭೆ ಪ್ರಾರಂಭಿಸಿ, ಚುನಾವಣಾ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಚುನಾವಣೆ ಅಧ್ಯಾಕ್ಷಾಧಿಕಾರಿಗಳು ಆಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.