ಧಾರವಾಡ : ಹು-ಧಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿಗಳಿಗೆ ಆಗಷ್ಟ್ 8 ರಂದು ಚುನಾವಣೆ

ಧಾರವಾಡ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 22ನೇ ಅವಧಿಗೆ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳಿಗೆ ಸದಸ್ಯರನ್ನು ಚುನಾಯಿಸುವ ಕುರಿತ ಚುನಾವಣೆಯನ್ನು ಆಗಸ್ಟ್ 8 ರಂದು ಧಾರವಾಡದ ಪಾಲಿಕೆಯ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಭಾಭವನದಲ್ಲಿ ನಿಗದಿಪಡಿಸಲಾಗಿದೆ.
ಆಗಸ್ಟ್ 8 ರಂದು ಬೆಳಿಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳಿಗೆ ನಾಮ ಪತ್ರಗಳನ್ನು ಸ್ವೀಕಾರ ಮಾಡಲಾಗುವುದು. ನಂತರ 1 ಗಂಟೆಗೆ ಸಭೆ ಮತ್ತು ಚುನಾವಣೆಯ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿಯ ಚುನಾವಣೆ ಅಧ್ಯಕ್ಷಾಧಿಕಾರಿ ಎಸ್.ಬಿ. ಶೆಟ್ಟಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.