ಧಾರವಾಡ : ಏಪ್ರಿಲ್ 18ರಂದು ವಿದ್ಯುತ್ ಗ್ರಾಹಕರ ಕುಂದುಕೊರತೆ ಸಭೆ
ಧಾರವಾಡ : ಹೆಸ್ಕಾಂ ಧಾರವಾಡ ಗ್ರಾಮೀಣ ಉಪ ವಿಭಾಗದ ಕಚೇರಿಯಲ್ಲಿ ಏಪ್ರಿಲ್ 18 ರಂದು ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಜರುಗಲಿದೆ ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಏಪ್ರಿಲ್ 18 ರಂದು ಮಧ್ಯಾಹ್ನ 3 ರಿಂದ ಸಂಜೆ 5.30 ರವರೆಗೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ(ವಿ) ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ವಿದ್ಯುತ್ ಗ್ರಾಹಕರು, ಸಾರ್ವಜನಿಕರು ಪಾಲ್ಗೊಂಡು ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದೆಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.