ಅಬಕಾರಿ ನೀತಿ ಹಗರಣ: ಕೇಜ್ರಿವಾಲ್‌ಗೆ ಜಾಮೀನು ಮಂಜೂರು

ಅಬಕಾರಿ ನೀತಿ ಹಗರಣ: ಕೇಜ್ರಿವಾಲ್‌ಗೆ ಜಾಮೀನು ಮಂಜೂರು

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ದೆಹಲಿ ಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ. 

ಜಾಮೀನು ಕೋರಿ ದೆಹಲಿ ಸಿಎಂ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸಂಬಂಧಿಸಿದ ವಾದ-ಪ್ರತಿವಾದ ಆಲಿಸಿದ್ದ ರೋಸ್ ಅವೆನ್ಯೂ ಕೋರ್ಟ್ ವಿಶೇಷ ನ್ಯಾಯಾಧೀಶರಾದ ನಿಯಾಯ್ ಬಿಂದು ಅವರು ಆದೇಶವನ್ನು ಕಾಯ್ದಿರಿಸಿದ್ದರು. 

ಇಂದು ಸಂಜೆ ತೀರ್ಪು ಪ್ರಕಟಿಸಿದ ನ್ಯಾಯಾಧೀಶರಾದ ನಿಯಾಯ್ ಬಿಂದು ಅವರು, ಅರವಿಂದ್ ಕೇಜ್ರಿವಾಲ್ ಅವರಿಗೆ 1 ಲಕ್ಷ ರೂ. ಮೊತ್ತದ ಬಾಂಡ್ ಮೇಲೆ ಜಾಮೀನು ನೀಡಿದ್ದಾರೆ.