ಬಂಡಿಫೋರ್ ದಲ್ಲಿ ಸ್ಫೋಟ : 6 ಜನಕ್ಕೆ ಗಾಯ ಆಸ್ಪತ್ರೆಗೆ ದಾಖಲು

ಬಂಡಿಪೋರ : ಬಂಡಿಪೋರಾದ ಸುಂಬಲ್ ಪ್ರದೇಶದ ಟ್ಯಾಕ್ಸಿ ನಿಲ್ದಾಣದಲ್ಲಿ ಸ್ಫೋಟ ಸಂಭವಿಸಿದೆ. ಈ ಗ್ರೆನೇಡ್ ಸ್ಫೋಟದಿಂದ 6 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಕೆಲವು ವಾಹನಗಳು ಜಖಂಗೊಂಡಿವೆ. ಗಾಯಗೊಂಡವರನ್ನೆಲ್ಲ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವವರನ್ನು ಶ್ರೀನಗರ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಸದ್ಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸ್ಫೋಟಕ್ಕೆ ಕಾರಣವೇನು? ದಾಳಿ ಹಿಂದಿನ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.