ಫೆಂಗಲ್ ಚಂಡಮಾರುತ ಎಫೆಕ್ಟ್ : ನಾಳೆ ಬಿಬಿಎಂಪಿ ಅಧಿಕಾರಿಗಳಿಗೆ ರಜೆ ರದ್ದು..!

ಫೆಂಗಲ್ ಚಂಡಮಾರುತ ಎಫೆಕ್ಟ್ : ನಾಳೆ ಬಿಬಿಎಂಪಿ ಅಧಿಕಾರಿಗಳಿಗೆ ರಜೆ ರದ್ದು..!

ಬೆಂಗಳೂರು : ಫೆಂಗಲ್ ಚಂಡಮಾರುತ ಎಫೆಕ್ಟ್ ಹಿನ್ನೆಲೆ ನಾಳೆ ಅಂದ್ರೆ ಡಿ. 1ರಂದು ಬಿಬಿಎಂಪಿ ಅಧಿಕಾರಿಗಳಿಗೆ ರಜೆ ರದ್ದು ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಹೇಳಿಕೆ ನೀಡಿದ್ದಾರೆ. 

ಈಗಾಗಲೇ ಹವಾಮಾನ ಇಲಾಖೆ ಫೆಂಗಲ್ ಚಂಡಮಾರುತದ ಬಗ್ಗೆ ಎಚ್ಚರಿಕೆ ನೀಡಿದೆ, ಬೆಂಗಳೂರು ಸೇರಿದಂತೆ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಅದರಿಂದ ಬಿಬಿಎಂಪಿ ಇಲಾಖೆ ಎಚ್ಚರಿಕೆ ನೀಡಿರುವ ಹಿನ್ನೆಲೆ ನಾಳೆ ಭಾನುವಾರವಾದ್ರೂ ಕೂಡ ಯಾವ ಅಧಿಕಾರಿಗಳಿಗೂ ರಜೆ ಇಲ್ಲ, ತಗ್ಗು ಪ್ರದೇಶ,ಕೆರೆ ಅಂಗಳದ ಪ್ರದೇಶಗಳಲ್ಲಿ‌ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರೆ. 

ನಾಳೆ ಮಳೆಯಿಂದ ಯಾವುದಾದರೂ ತೊಂದರೆಯಾದರೆ ಅಧಿಕಾರಿಗಳೇ ನೇರ ಕಾರಣ ಎಂದು ಕೂಡ ತಿಳಿಸಿದರೆ. ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಸೂಚನೆಯನ್ನು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ನೀಡಿದ್ದಾರೆ.