ತಾರಿಹಾಳ ಸ್ಪಾರ್ಕರ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ: ಮೃತರ ಸಂಖ್ಯೆ 3 ಕ್ಕೆ ಏರಿಕೆ

ತಾರಿಹಾಳ ಸ್ಪಾರ್ಕರ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ: ಮೃತರ ಸಂಖ್ಯೆ 3 ಕ್ಕೆ ಏರಿಕೆ

ಹುಬ್ಬಳ್ಳಿ : ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ಪ್ರದೇಶದ ಸ್ಪಾರ್ಕರ್ ಕಾರ್ಖಾನೆಯಲ್ಲಿ ನಡೆದ ಬೆಂಕಿ ಅವಘಡ ಪ್ರಕರಣದಲ್ಲಿ ಸಾವಿನ ಸಂಖ್ಯೆ ಏರಿಕೆಯಾಗಿದೆ. 

ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ತಡರಾತ್ರಿ ಸಾವನ್ನಪ್ಪಿದ್ದಾಳೆ. ಗದಗ ಮೂಲದ ವಿಜಯಲಕ್ಷ್ಮಿ ವೀರಭದ್ರಪ್ಪ ಯಚ್ಚನಾಗರ (35) ಸಾವನ್ನಪ್ಪಿದ ಮಹಿಳೆ. 

ಇವರಿಗೆ ಶೇ. 90 ರಷ್ಟು ಸುಟ್ಟಗಾಯಗಳಾಗಿದ್ದವು. ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಕಿಮ್ಸ್ ನಲ್ಲಿ ಸಾವನ್ನಪ್ಪಿದ್ದಾಳೆ. ಇನ್ನೂ ಗಂಭೀರವಾಗಿದ್ದ ಗೌರವ್ವ (45) ಮಾಳೇಶ (27) ಎಂಬುವವರು ಇಂದು ಬೆಳಗ್ಗೆ ಮೃತಪಟ್ಟಿದ್ದು ಸದಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಇನ್ನು ಉಳಿದ ನಾಲ್ವರಿಗೆ ಕಿಮ್ಸ್ ನಲ್ಲಿ ಚಿಕಿತ್ಸೆ ಮುಂದುವರಿದಿದೆ.