ತುಮಕೂರಿನಲ್ಲಿ ಮೊದಲ ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ

ತುಮಕೂರು:ಜಿಲ್ಲೆಯಲ್ಲಿ ಮೊದಲ ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು,ಮಧುಗಿರಿ ಮೂಲದ ವ್ಯಕ್ತಿಯಲ್ಲಿ ಪ್ರಕರಣ ಪತ್ತೆಯಾಗಿದೆ.
ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಹೃದಯರೋಗ ಸಂಬಂಧ ಜಯದೇವ ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿ,ಈ ವೇಳೆ ಕೋವಿಡ್ ಪರೀಕ್ಷೆ ನಡೆಸಿದಾಗ ಪ್ರಕರಣ ಪತ್ತೆಯಾಗಿದೆ,ಜಯದೇವ ಆಸ್ಪತ್ರೆಯಲ್ಲೇ ಪ್ರತ್ಯೇಕವಾಗಿ ಚಿಕಿತ್ಸೆ ಮುಂದುವರಿಸಲಾಗಿದೆ.
ಸೋಂಕಿತರ ಸಂಪರ್ಕಕ್ಕೆ ಬಂದವರ ಮೇಲೆ ಆರೋಗ್ಯ ಇಲಾಖೆ ನಿಗಾ ವಹಿಸಿದೆ ಎಂದು ಡಿಎಚ್ಒ ಮಂಜುನಾಥ್ ತಿಳಿಸಿದ್ದಾರೆ.