ಹುಬ್ಬಳ್ಳಿಯಿಂದ ಅಹಮದಾಬಾದ್‌ಗೆ ವಿಮಾನ ಸೇವೆ ಆರಂಭ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಗುಜರಾತ್‌ನ ಅಹಮದಾಬಾದ್‌ಗೆ ವಿಮಾನಯಾನ ಸೇವೆ ಶೀಘ್ರದಲ್ಲೇ ಆರಂಭವಾಗಲಿದೆ.
ಮಾರ್ಚ್ 31ರಿಂದ ಈ ಮಾರ್ಗದಲ್ಲಿ ವಿಮಾನ ಸಂಚಾರ ಆರಂಭವಾಗಲಿದೆ. ಹುಬ್ಬಳ್ಳಿಯಿಂದ ಅಹಮದಾಬಾದ್‌ಗೆ ವಿಮಾನಯಾನ ಸೇವೆ ಆರಂಭಿಸಬೇಕು ಎಂಬುದು ಸ್ಥಳೀಯರ ಬಹುದಿನಗಳ ಬೇಡಿಕೆ ಆಗಿತ್ತು. ಸಂಜೆ 4-40ಕ್ಕೆ ಹುಬ್ಬಳ್ಳಿಯಿಂದ ಹೊರಡಲಿರುವ ವಿಮಾನ ಸಂಜೆ 6 ಗಂಟೆಗೆ ಮುಂಬೈ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದೆ. ನಂತರ ರಾತ್ರಿ 9 ಗಂಟೆ 05 ನಿಮಿಷಕ್ಕೆ ಅಹಮದಾಬಾದ್ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದೆ. ಪ್ರಯಾಣಿಕರು ಐದು ತಾಸಿನೊಳಗಾಗಿ ಹುಬ್ಬಳ್ಳಿಯಿಂದ ಅಹಮದಾಬಾದ್‌ಗೆ ತಲುಪಬಹುದಾಗಿದೆ.