ಕೋಲ್ಕತ್ತಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಕೋಲ್ಕತ್ತಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ಅವರು ಗುರುವಾರ ಪಕ್ಷದ ರಾಜ್ಯ ಮುಖ್ಯಸ್ಥ ಸುಕಾಂತ ಮಜುಂದಾರ್, ಲೋಪಿ ಸುವೆಂದು ಅಧಿಕಾರಿ ಮತ್ತು ಇತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಗಂಗೋಪಾಧ್ಯಾಯ ಅವರು ಮಂಗಳವಾರ ನ್ಯಾಯಾಧೀಶರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ‘ಬಂಗಾಳದಲ್ಲಿ ಟಿಎಂಸಿಯ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹೋರಾಡುತ್ತಿದೆ. ಹೀಗಾಗಿ ರಾಷ್ಟ್ರೀಯ ಪಕ್ಷವಾಗಿರುವ ಬಿಜೆಪಿಯನ್ನು ಸೇರುತ್ತಿದ್ದೇನೆ’ ಎಂದು ರಾಜೀನಾಮೆ ನೀಡಿದ ಬಳಿಕ ಹೇಳಿದ್ದಾರೆ.