ಹುಬ್ಬಳ್ಳಿ: ಹೊರಟ್ಟಿ ಮನೆಗೆ ತೆರಳಿ ಬಿ ಫಾರ್ಮ್ ನೀಡಿದ ಮಾಜಿ ಸಿಎಂ, ಬಿಜೆಪಿ ಮುಖಂಡರು

ಹುಬ್ಬಳ್ಳಿ: ಪಶ್ಚಿಮ ಶಿಕ್ಷಕ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಅಖಾಡದ ಹಿನ್ನೆಲೆಯಲ್ಲಿ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರ ಮನೆಗೆ ತೆರಳಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಹೇಶ್ ಟೆಂಗಿನಕಾಯಿ ಸೇರಿದಂತೆ ಹಲವಾರು ಬಿಜೆಪಿ ಮುಖಂಡರು ಸೇರಿ ಬಿ ಫಾರ್ಮ್ ನೀಡಿದ್ದಾರೆ.
ಜೆಡಿಎಸ್ ಬಿಟ್ಟು ಬಂದಿರುವ ಬಸವರಾಜ ಹೊರಟ್ಟಿ ಅವರು ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಶಿಕ್ಷಕರ ಕ್ಷೇತ್ರದಿಂದ ನಿರಂತರ ಗೆಲುವಿನ ನಾಗಾಲೋಟ ಮುಂದುವರೆಸಿರುವ ಬಸವರಾಜ ಹೊರಟ್ಟಿ, ಈ ಚುನಾವಣೆಗೆ ಬಿಜೆಪಿಯ ಹಲವರು ಟಿಕೆಟ್‌ಗಾಗಿ ಲಾಬಿ ಮಾಡಿದ್ದರು. ಬಿಜೆಪಿಗೆ ಸೇರಿದ ಹೊರಟ್ಟಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಇದು ಕೆಲ ಬಿಜೆಪಿ ನಾಯಕರಲ್ಲಿ ಅಸಮಾಧಾನ ಉಂಟಾಗಿದೆ.