ಮಹಾರಾಷ್ಟ್ರದ ಮಾಜಿ ಸಿಎಂ ಮನೋಹರ್ ಜೋಶಿ ನಿಧನ

ಮಹಾರಾಷ್ಟ್ರದ ಮಾಜಿ ಸಿಎಂ ಮನೋಹರ್ ಜೋಶಿ ನಿಧನ

ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಲೋಕಸಭೆ ಮಾಜಿ ಸ್ಪೀಕರ್ ಮನೋಹರ್ ಜೋಶಿ (86) ಹೃದಯಾಘಾತದಿಂದ ಮುಂಬೈನಲ್ಲಿ ನಿಧನರಾಗಿದ್ದಾರೆ. 

ಮನೋಹರ್ ಜೋಶಿ ಅವರನ್ನು ಬುಧವಾರ ಪಿಡಿ ಹಿಂದೂಜಾ ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಿಸಲಾಗಿತ್ತು. ಶಿವಸೇನೆ ನಾಯಕರಾಗಿದ್ದ ಮನೋಹರ್ ಅವರು 1995ರಿಂದ 1999 ರವರೆಗೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಅವರು 2002ರಿಂದ 2004 ರವರೆಗೆ ಲೋಕಸಭಾ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದರು.