ರಾಜಕೀಯ ಬಿಟ್ಟು ಸನ್ಯಾಸತ್ವ ಸ್ವೀಕರಿಸಿದ ಮಾಜಿ ಸಚಿವ ಪುಟ್ಟಸ್ವಾಮಿ !
ಬೆಂಗಳೂರು: ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿ ಅವ್ರು ಸನ್ಯಾಸತ್ವ ಸ್ವೀಕರಿಸಿದ್ದಾರೆ. ಅವರಿಗೆ ಈಗ ಶ್ರೀ ಪೂರ್ಣಾನಂದ ಪುರಿ ಸ್ವಾಮಿ ಅಂತಲೂ ನಾಮಕರಣ ಮಾಡಲಾಗಿದೆ.
ಕೈಲಾಸ್ ಆಶ್ರಮದ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ಜಯೇಂದ್ರಪುರಿ ಮಹಾಸ್ವಾಮಿಗಳು ಶ್ರೀ ಪೂರ್ಣಾನಂದ ಪುರಿ ಸ್ವಾಮಿ ದೀಕ್ಷೆ ನೀಡಿದ್ದಾರೆ.
ಶ್ರೀ ಪೂರ್ಣಾನಂದ ಪುರಿ ಸ್ವಾಮಿಗಳು ಮೇ-8 ರಂದು ಬೆಂಗಳೂರಿನ ಮಾದನಾಯಕಹಳ್ಳಿಯಲ್ಲಿರೋ ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠಕ್ಕೆ ತೆರಳುತ್ತಿದ್ದಾರೆ. ಮೇ-15 ರಂದು ಪ್ರಥಮ ಪೀಠಾಧಿಪತಿಯಾಗಿ ಶ್ರೀ ಪೂರ್ಣಾನಂದ ಪುರಿ ಸ್ವಾಮಿಗಳು ಅಲಂಕೃತಗೊಳ್ಳಲಿದ್ದಾರೆ.