ಬೆಂಗಳೂರು: ಮತ್ತೊಮ್ಮೆ ಡಾಕ್ಟರೇಟ್ ಗೌರವಕ್ಕೆ ಒಳಗಾದ ಮಾಜಿ ಪಿಎಂ ದೇವೇಗೌಡ

ಬೆಂಗಳೂರು: ಮತ್ತೊಮ್ಮೆ ಡಾಕ್ಟರೇಟ್ ಗೌರವಕ್ಕೆ ಒಳಗಾದ ಮಾಜಿ ಪಿಎಂ ದೇವೇಗೌಡ

ಬೆಂಗಳೂರು ವಿಶ್ವವಿದ್ಯಾಲಯದ 58ನೇ ವಾರ್ಷಿಕ ಘಟಿಕೋತ್ಸವ ಹಿನ್ನೆಲೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ವತಿಯಿಂದ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ವಿವಿಯ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಹೆಚ್.ಡಿ ದೇವೇಗೌಡ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸತ್ಕರಿಸಿದರು. 

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ವಿವಿ ಕುಲಪತಿ ಡಾ.ಜಯಕರ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.