ಪತ್ನಿ ಸಮೇತ ಮತಗಟ್ಟೆಗೆ ಬಂದು ಮತದಾನ ಮಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಪತ್ನಿ ಸಮೇತ ಮತಗಟ್ಟೆಗೆ ಬಂದು ಮತದಾನ ಮಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಹಾಸನ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 14 ಕ್ಷೇತ್ರಗಳಿಗೆ ಮತದಾನ ಚುರುಕುಗೊಂಡಿದೆ. ಬಿಸಿಲ ಝಳದ ನಡುವೆಯೂ ಜನರು ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. 

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಪತ್ನಿ ಚೆನ್ನಮ್ಮ ಜೊತೆ ಮತಗಟ್ಟೆಗೆ ಆಗಮಿಸಿ ಹಾಸನದಲ್ಲಿ ಮತದಾನ ಮಾಡಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ ಪಡುವಲಹಿಪ್ಪಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ದೇವೇಗೌಡ ದಂಪತಿ ಮತದಾನ ಮಾಡಿದರು. 

ಮತದಾನದ ಬಳಿಕ ಮಾತನಾಡಿದ ದೇವೇಗೌಡರು, ಎಲ್ಲರೂ ತಮ್ಮ ಅಮೂಲ್ಯ ಮತವನ್ನು ಚಲಾಯಿಸುವ ಮೂಲಕ ಮತದಾನ ಮಾಡಿ ಎಂದು ಕರೆ ನೀಡಿದರು.