ಬ್ರೇಕಿಂಗ್: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ನಲ್ಲಿ ಇಂದು ವಿಧಿವಶರಾಗಿದ್ದಾರೆ.
92 ವರ್ಷದ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ರಾತ್ರಿ 8 ಗಂಟೆ ಸುಮಾರಿಗೆ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಏಮ್ಸ್) ದಾಖಲಿಸಲಾಗಿತ್ತು. ತುರ್ತು ನಿಗಾ ವಿಭಾಗದಲ್ಲಿ ಚಿಕಿತ್ಸೆ ಕೊಡಲಾಗುತ್ತಿತ್ತು.
ಮನಮೋಹನ್ ಸಿಂಗ್ ಅವರು 1991- 96ರ ಅವಧಿಯಲ್ಲಿ ಮಾಜಿ ಪ್ರಧಾನಿ ಪಿ. ವಿ. ನರಸಿಂಹರಾವ್ ಅವರ ನೇತೃತ್ವದ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿ ಮೆಚ್ಚುಗೆ ಗಳಿಸಿದ್ದರು. ದೇಶದ ಆರ್ಥಿಕತೆಯಲ್ಲಿ ವ್ಯಾಪಕ ಸುಧಾರಣೆಗಳನ್ನು ತಂದಿದ್ದರು.