ನವದೆಹಲಿ: ಭಾರತ್ ಜೋಡೋ ಯಾತ್ರೆಯಲ್ಲಿ ಆರ್‌ಬಿಐ ಮಾಜಿ ಗವರ್ನರ್ ರಘುರಾಮ್!

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಮಾಜಿ ಗವರ್ನರ್ ರಘುರಾಮ್ ರಾಜನ್ ಭಾಗಹಿಸಿದ್ದು ಎಲ್ಲರ ಗಮನ ಸೆಳೆದಿದೆ.
ರಾಜಸ್ಥಾನದ ಮೂಲಕ ಸಾಗುತ್ತಿರುವ ಯಾತ್ರೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಮಾಜಿ ಗವರ್ನರ್ ರಘುರಾಮ್ ರಾಜನ್, ಸಚಿನ್ ಪೈಲಟ್ ಹಾಗೂ ರಾಹುಲ್ ಗಾಂಧಿ ಒಟ್ಟಿಗೆ ನಡೆದುಕೊಂಡು ಹೋಗಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ.