ಮೇ 16 ರಿಂದ ಶಾಲೆಗಳು ಆರಂಭ- ಶಿಕ್ಷಣ ಇಲಾಖೆ ಆದೇಶಕ್ಕೆ ಪೋಷಕರು ಗರಂ

ಮೇ 16 ರಿಂದ ಶಾಲೆಗಳು ಆರಂಭ- ಶಿಕ್ಷಣ ಇಲಾಖೆ ಆದೇಶಕ್ಕೆ ಪೋಷಕರು ಗರಂ


ಬೆಂಗಳೂರು: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷವನ್ನು ಮೇ 16ರಿಂದಲೇ ಆರಂಭಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷವನ್ನು 'ಕಲಿಕಾ ಚೇತರಿಕೆ ವರ್ಷ' ಎಂದು ಸಂಕಲ್ಪ ಮಾಡಲಾಗಿದ್ದು, ಮಕ್ಕಳ ಕಲಿಕೆ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಶಾಲೆಗಳಿಗೆ ಸೂಚನೆ ನೀಡಲಾಗಿದೆ. 

ಮೇ‌ 16ರಿಂದ ಜೂನ್ 15ರವರೆಗೆ, ಒಂದು ತಿಂಗಳ ಅವಧಿಗೆ ಸೇತುಬಂಧ ಕಾರ್ಯಕ್ರಮ ನಡೆಸಲು ಶಾಲೆಗಳಿಗೆ ಸೂಚನೆ ನೀಡಲಾಗಿದೆ. ಮೇ 16ರಿಂದಲೇ ಮಕ್ಕಳ ದಾಖಲಾತಿ ಆರಂಭಿಸಿ, ಜುಲೈ 31ರೊಳಗೆ ಮುಗಿಸಬೇಕು. ಮೇ 14ರಿಂದ ತರಗತಿ ಆರಂಭಕ್ಕೆ ಪೂರ್ವ ತಯಾರಿ ಮಾಡಿಕೊಳ್ಳಬೇಕು. ಮೇ 16ರಿಂದ 20ರವರೆಗೆ ದಾಖಲಾತಿ ಆಂದೋಲನ ನಡೆಸಬೇಕು. ಜೂನ್ 1ರಿಂದ ಕಲಿಕಾ ಚೇತನ ಕಾರ್ಯಕ್ರಮದಡಿ ಪಠ್ಯ ಬೋಧನೆ ನಡೆಸಬೇಕು ಎಂದು ಶಿಕ್ಷಣ ಇಲಾಖೆ ಹೇಳಿದೆ. 

ಅವಧಿಗೆ ಮೊದಲೇ ಶಾಲೆಗಳನ್ನು ಆರಂಭಿಸಬೇಕು ಎನ್ನುವ ಶಿಕ್ಷಣ ಇಲಾಖೆ ಸೂಚನೆಗೆ ಪೋಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. 'ಖಾಸಗಿ ಶಾಲೆಗಳ ಲಾಬಿಗೆ ಸರ್ಕಾರ ಮಣಿಯುತ್ತಿದೆ. ಪ್ರವೇಶ ಶುಲ್ಕ ತೆತ್ತು, ಸಮವಸ್ತ್ರ ಖರೀದಿಸಿದ ಬಳಿಕ ಲಾಕ್​ಡೌನ್ ಘೋಷಿಸುತ್ತಾರೆ. ಲಾಕ್​ಡೌನ್ ಹೇರಿಕೆ ಕಾರಣಕ್ಕೆ ಆನ್​ಲೈನ್ ತರಗತಿ ಆರಂಭಿಸುತ್ತಾರೆ. ಇದು ದೊಡ್ಡ ಹುನ್ನಾರ ಎಂದು ಪೋಷಕರು ಬೇಸರ ವ್ಯಕ್ತಪಡಿಸಿದ್ದಾರೆ.