ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ: ಆಲ್ ದಿ ಬೆಸ್ಟ್ ಮಕ್ಕಳೇ

ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ: ಆಲ್ ದಿ ಬೆಸ್ಟ್ ಮಕ್ಕಳೇ

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಗಳು ಮಾರ್ಚ್‌ 9ರಿಂದ ಆರಂಭವಾಗುತ್ತಿದ್ದು, ಪ್ರತಿ ದಿನ ಬೆಳಿಗ್ಗೆ 10:15ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆಗಳು ನಡೆಯಲಿವೆ. 

ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್, ‘ಯಾವುದೇ ಗೊಂದಲಕ್ಕೆ ಅವಕಾಶ ನೀಡದಂತೆ ಪ‍ರೀಕ್ಷೆ ಬರೆಯಲು ಎಲ್ಲ ರೀತಿಯ ತಯಾರಿಯನ್ನೂ ನಡೆಸಲಾಗಿದೆ. ಈ ಬಾರಿಯೂ ಹಿಜಾಬ್ ಧರಿಸಿ ಬಂದವರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ. ವಿದ್ಯಾರ್ಥಿಗಳಿಗೆ ಸಮವಸ್ತ್ರ ನಿಯಮ ಪಾಲನೆ ಕಡ್ಡಾಯ’ ಎಂದು ಹೇಳಿದ್ದಾರೆ. 

ಪರೀಕ್ಷೆ ಕುರಿತು ಸಾಮಾಜಿಕ ತಾಣಗಳಲ್ಲಿ ವಿದ್ಯಾರ್ಥಿಗಳು ಹಾಗೂ ಪಾಲಕರಲ್ಲಿ ವದಂತಿ, ಗೊಂದಲ ಸೃಷ್ಟಿಸುವವರ ವಿರುದ್ಧ ಕಾನೂನು ಕ್ರಮ ಜರಗಿಸುವ ಎಚ್ಚರಿಕೆಯನ್ನು ಸರಕಾರ ನೀಡಿದೆ. 

1,109 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ಈ ಹಿಂದೆ ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದವರ ಮೇಲೆ ನಿಗಾ ಇರಿಸಲಾಗಿದೆ. ಪರೀಕ್ಷಾ ಕೇಂದ್ರಗಳು, ಭದ್ರತಾ ಕೊಠಡಿಗಳು, ಜಿಲ್ಲಾಧಿಕಾರಿಗಳ ಕಚೇರಿ ಮತ್ತು ಮಂಡಳಿಯ ಕೇಂದ್ರ ಕಚೇರಿಯ ಮೇಲೆ ಸಿಸಿ ಕೆಮರಾ ಹಾಗೂ ಪೊಲೀಸ್‌ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.