BREAKING: ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟ ಗುಲಾಂ ನಬಿ ಆಜಾದ್

BREAKING: ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟ ಗುಲಾಂ ನಬಿ ಆಜಾದ್

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿ ಎಲ್ಲ ಸ್ಥಾನಮಾನಗಳಿಗೆ ರಾಜೀನಾಮೆ ನೀಡಿದ್ದಾರೆ‌. 

ಲೋಕಸಭೆ ಚುನಾವಣೆಗೆ ತೆರೆಮರೆಯ ತಯಾರಿ ನಡೆಸುತ್ತಿರುವ ಕಾಂಗ್ರೆಸ್‌ಗೆ ಇದು ಬಹುದೊಡ್ಡ ಆಘಾತವನ್ನುಂಟು ಮಾಡಿದೆ. ಕಾಂಗ್ರೆಸ್ ಪಕ್ಷದ ಜಿ- 23 ನಾಯಕರಲ್ಲಿ ಗುರುತಿಸಿಕೊಂಡಿದ್ದ ಆಜಾದ್ ತಮ್ಮ ನಾಯಕರ ಮೇಲೆ ಅಸಮಾಧಾನ ಹೊಂದಿದ್ದಾರೆ ಎನ್ನಲಾಗಿದೆ‌. 

ತಮ್ಮ ರಾಜೀನಾಮೆ ಪತ್ರದಲ್ಲಿ ರಾಹುಲ್ ಗಾಂಧಿ ಬಗ್ಗೆ ಅಸಮಧಾನ ವ್ಯಕ್ತಪಡಿಸಿರುವ ಅವರು, ರಾಹುಲ್ ಗಾಂಧಿ ಅವರ ಚೈಲ್ಡಿಶ್ ವರ್ತನೆಯಿಂದ ಪಕ್ಷ ಅಧೋಗತಿಗೆ ಬಂದಿದೆ. ಭಾರತ್ ಜೋಡೊ ಯಾತ್ರೆ ಬದಲಾಗಿ ಇವರು ಕಾಂಗ್ರೆಸ್ ಜೋಡೊ ಯಾತ್ರೆ ಮಾಡಬೇಕಿತ್ತು‌‌. ಕಪಿಲ್ ಸಿಬಲ್ ಮನೆ ಮೇಲೆ ಸ್ವತಃ ಕಾಂಗ್ರೆಸ್ ಕಾರ್ಯಕರ್ತರೇ ದಾಳಿ ಮಾಡಿದ್ದರು. ಎಐಸಿಸಿಯಲ್ಲಿ ಆಂತರಿಕ ಚುನಾವಣಾ ಪ್ರಕ್ರಿಯೆ ಇಲ್ಲ. ಎಲ್ಲವೂ ಕಾನೂನು ಬಾಹಿರವಾಗಿ ನಡೆಯುತ್ತಿದೆ ಎಂದು ಗುಲಾಂ ನಬಿ ಆಜಾದ್ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.