ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಚಿನ್ನದ ಬೆಲೆ.!

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಚಿನ್ನದ ಬೆಲೆ.!

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಶುಕ್ರವಾರ ಚಿನ್ನವು ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಮೊದಲ ಬಾರಿಗೆ ಔನ್ಸ್‌ಗೆ 3,000 ದಾಟಿದೆ. ಸ್ಪಾಟ್ ಚಿನ್ನವು ಔನ್ಸ್‌ಗೆ 3,000.87 ಡಾಲರ್‌ (ಸುಮಾರು 2,60,849.87 ರೂಪಾಯಿ)ಗೆ 0.4% ಏರಿಕೆಯಾಗಿದೆ. 

ಇನ್ನು ಯುಎಸ್ ಚಿನ್ನದ ಬೆಲೆಯಲ್ಲಿ 0.7% ಏರಿಕೆಯಾಗಿ 3,013.60 ಡಾಲರ್‌ಗೆ ತಲುಪಿದೆ. ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯುರೋಪಿಯನ್ ಸರಕುಗಳ ಮೇಲೆ ಹೆಚ್ಚುವರಿ ಸುಂಕ ವಿಧಿಸುವುದಾಗಿ ಬೆದರಿಕೆ ಹಾಕಿದ ನಂತರ ಚಿನ್ನದ ಬೆಲೆ ಗಗನಕ್ಕೆ ಏರುತ್ತಿದೆ.