BREAKING: ಕ್ರಿಕೆಟ್ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐದು ಪಂದ್ಯಗಳನ್ನ ಆಡಲು ಒಪ್ಪಿಗೆ.!
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಆಡಳಿತ ಮಂಡಳಿಯು ಪ್ರಮುಖ ನಿರ್ಧಾರ ಕೈಗೊಂಡಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಮತ್ತು ರಾಜ್ಯ ಸರ್ಕಾರದೊಂದಿಗೆ ನಡೆದ ಮಾತುಕತೆ ಬಳಿಕ, ಆರ್‌ಸಿಬಿ ತನ್ನ ಐಪಿಎಲ್ ಐದು ಪಂದ್ಯಗಳನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲು ಸಮ್ಮತಿಸಿದೆ. ಇದರ ಜೊತೆಗೆ, ತಂಡವು ಛತ್ತೀಸ್‌ಗಢದಲ್ಲಿ ಎರಡು ಪಂದ್ಯಗಳನ್ನು ಆಡಲು ಕೂಡ ಒಪ್ಪಿಗೆ ಸೂಚಿಸಿದೆ.