ರಾಜ್ಯದ SSLC, PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ರಾಜ್ಯದ SSLC, PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: SSLC & PUC ವಾರ್ಷಿಕ ಪರೀಕ್ಷೆ ವೇಳೆ KSRTC ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಲು ನಿಗಮ ಅವಕಾಶ ಕಲ್ಪಿಸಿ ಕೊಟ್ಟಿದೆ. 
ಮಾರ್ಚ್ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ ಆಗಲಿದ್ದು, ಮಾರ್ಚ್ 21 ರಿಂದ SSLC ವಾರ್ಷಿಕ ಪರೀಕ್ಷೆ ಆರಂಭ ಆಗುತ್ತೆ. ಈ ಹಿನ್ನೆಲೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಸಾರಿಗೆ ಸೇವೆ ಕಲ್ಪಿಸಲಾಗಿದೆ. ಪರೀಕ್ಷೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಗಳಂದು ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ್ದು ಅಧಿಕೃತ ಆದೇಶ KSRTC ಹೊರಡಿಸಿದೆ. ವಿದ್ಯಾರ್ಥಿಗಳ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೂ ಸಾರಿಗೆ ಸೇವೆ ಒದಗಿಸಲಿದ್ದು, ಪರೀಕ್ಷೆ ಹಾಲ್ ಟಿಕೆಟ್ ತೋರಿಸಿ ಬಸ್ ಗಳಲ್ಲಿ ಪ್ರಯಾಣಿಸಲು ಅವಕಾಶವಿದೆ.