ದೇಶದ ಜನತೆಗೆ ಸಿಹಿ ಸುದ್ದಿ - ದೇಶಾದ್ಯಂತ 25,000 ಜನೌಷಧಿ ಕೇಂದ್ರ ತೆರೆಯಲು ಕೇಂದ್ರ ಸರ್ಕಾರ ನಿರ್ಧಾರ

ನವದೆಹಲಿ : ದೇಶದ ಜನತೆಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಕಡಿಮೆ ದರದಲ್ಲಿ ಉತ್ತಮ ಔಷಧಿ ವಿತರಿಸುವ ಜನೌಷಧಿ ಕೇಂದ್ರಗಳ ಸಂಖ್ಯೆಗಳನ್ನು ಹೆಚ್ಚಿಸಲು ಚಿಂತನೆ ನಡೆಸಿದೆ.
ದೇಶಾದ್ಯಂತ ಮುಂದಿನ ಎರಡರಿಂದ ಮೂರು ವರ್ಷಗಳಲ್ಲಿ25,000 ಜನೌಷಧಿ ಕೇಂದ್ರಗಳನ್ನು ತೆರೆಯುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. 2,000 ಜನೌಷಧಿ ಕೇಂದ್ರಗಳನ್ನು ಪ್ರಾಥಮಿಕ ಕೃಷಿ ಸಾಲ ಸೊಸೈಟಿಗಳ ಮೂಲಕ ತೆರೆಯಲು ಯೋಜಿಸಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಮನ್ಸುಖ್ ಮಾಂಡವಿಯಾ ಘೋಷಿಸಿದ್ದಾರೆ.
‘ಪಿಎಸಿಎಸ್ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳು’ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿ, ದೇಶದಲ್ಲಿ ಜನೌಷಧಿ ಕೇಂದ್ರಗಳನ್ನು ತೆರೆಯಲು PACS ನಿಂದ 2,300 ಕ್ಕೂ ಹೆಚ್ಚು ಅರ್ಜಿಗಳನ್ನು ಫಾರ್ಮಾಸ್ಯುಟಿಕಲ್ಸ್ ಇಲಾಖೆ ಈಗಾಗಲೇ ಅನುಮೋದಿಸಿದೆ, ಅವುಗಳಲ್ಲಿ 500 ಈಗಾಗಲೇ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದ್ದಾರೆ.