ವಾಷಿಂಗ್ಟನ್ : ಗೂಗಲ್ ಸಿಇಒ ಸುಂದರ್ ಪಿಚೈಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ

ವಾಷಿಂಗ್ಟನ್ : ಗೂಗಲ್ ಸಿಇಓ ಸುಂದರ್ ಪಿಚೈಗೆ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಯನ್ನು ಹಸ್ತಾಂತರ ಮಾಡಲಾಯಿತು. ಅಮೇರಿಕಾದ ಭಾರತೀಯ ರಾಯಭಾರಿ ತರಂಜಿತ್ ಸಿಂಗ್ ಸಂಧು ಪ್ರಶಸ್ತಿಯನ್ನು ಹಸ್ತಾಂತರಿಸಿದರು. ಮಧುರೈನಲ್ಲಿ ಹುಟ್ಟಿ ಅಮೇರಿಕಾದಲ್ಲಿ ಬೆಳೆದ ಭಾರತೀಯ ಮೂಲದ ಸುಂದರ್ ಪಿಚೈಗೆ 2022 ರಲ್ಲಿ ವ್ಯಾಪಾರ ಹಾಗೂ ಕೈಗಾರಿಕೆ ವಿಭಾಗದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ದೇಶದ ಮೂರನೇ ಅತ್ಯುನ್ನತ ನಾಗರೀಕ ಪದ್ಮಭೂಷಣ ಪ್ರಶಸ್ತಿಯನ್ನು ಘೋಷಿಸಲಾಗಿತ್ತು.
ಭಾರತವು ನನ್ನ ಒಂದು ಭಾಗವಾಗಿದೆ. ಭಾರತದ ಸರ್ಕಾರಕ್ಕೆ ನಾನು ಚಿರ ಋಣಿಯಾಗಿದ್ದೇನೆ. ನಾನು ಎಲ್ಲಿಗೆ ಹೋದರೂ ಭಾರತವನ್ನು ಕೊಂಡೊಯ್ಯುತ್ತೇನೆ. ಈ ಸುಂದರ ಹಾಗೂ ಅತ್ಯುನ್ನತ ಪ್ರಶಸ್ತಿಯನ್ನು ನಾನು ಸುರಕ್ಷಿತವಾಗಿ ಇಡುತ್ತೇನೆ ಎಂದು ಭಾರತೀಯ ರಾಯಭಾರಿ ಕಚೇರಿಯಲ್ಲಿ ಪ್ರಶಸ್ತಿ ಸ್ವೀಕರಿಸಿದ ಬಳಿಕ ಸುಂದರ್ ಪಿಚೈ ಹೇಳಿದರು.