ಬ್ರೇಕಿಂಗ್: ಸಾಹಸ ಸಿಂಹ ಡಾ. ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ಘೋಷಿಸಿದ ಸರ್ಕಾರ

ಬ್ರೇಕಿಂಗ್: ಸಾಹಸ ಸಿಂಹ ಡಾ. ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ಘೋಷಿಸಿದ ಸರ್ಕಾರ

ಬೆಂಗಳೂರು: ಸಾಹಸಸಿಂಹ, ದಿವಂಗತ ವಿಷ್ಣುವರ್ಧನ್ ಅವರಿಗೆ 'ಕರ್ನಾಟಕ ರತ್ನ' ಪುರಸ್ಕಾರ ನೀಡಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. 

ಕನ್ನಡ ಸಿನಿಮಾರಂಗಕ್ಕೆ ವಿಷ್ಣುವರ್ಧನ್ ಅವರು ನೀಡಿದ ಕೊಡುಗೆಯನ್ನು ಪರಿಗಣಿಸಿ ಕರ್ನಾಟಕ ರತ್ನ ಪುರಸ್ಕಾರ ನೀಡಬೇಕೆಂದು ಅವರ ಪತ್ನಿ ಭಾರತೀ ವಿಷ್ಣುವರ್ಧನ್, ಅಳಿಯ ಅನಿರುದ್ಧ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ಜೊತೆಗೆ ನಟಿಯರಾದ ತಾರಾ, ಶೃತಿ, ಮಾಳವಿಕಾ ಅವಿನಾಶ್ ಕೂಡ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ರನ್ನು ಭೇಟಿಯಾಗಿ ಕರ್ನಾಟಕ ರತ್ನ ಪುರಸ್ಕಾರ ನೀಡಲು ಮನವಿ ಮಾಡಿದ್ದರು. ಈ ಬಗ್ಗೆ ಇಂದು ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ನಡೆಸಿ ಸಾಹಸ ಸಿಂಹ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪುರಸ್ಕಾರ ನೀಡಲು ಒಪ್ಪಿಗೆ ನೀಡಲಾಗಿದೆ.