ಎಸ್ಎಂ ಕೃಷ್ಣ ವಿಧಿವಶ, ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸಿದ ಸರ್ಕಾರ

ಎಸ್ಎಂ ಕೃಷ್ಣ ವಿಧಿವಶ, ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸಿದ ಸರ್ಕಾರ

ಬೆಂಳೂರು : ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ 92ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್ಎಂ ಕೃಷ್ಣ ತಮ್ಮ ಬೆಂಗಳೂರಿನ ಸದಾಶಿವನಗರದಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ ಇದರ ಹಿನ್ನಲೆಯಲ್ಲಿ ಮೂರು ದಿನದಳ ಕಾಲ ರಾಜ್ಯದಲ್ಲಿ ಶೋಕಾಚರಣೆ ಘೋಷಿಸಲಾಗಿದೆ. ಇದೇ ವೇಳೆ ನಾಳೆ(ಡಿ.11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಶಾಲಾ ಕಾಲೇಜು, ಸರ್ಕಾರಿ ಕಚೇರಿ ಸೇರಿದಂತೆ ರಾಜ್ಯಾದ್ಯಂತ ರಜೆ ಘೋಷಣೆ ಮಾಡಲಾಗಿದೆ. 

ಎಸ್ಎಂ ಕೃಷ್ಣ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಡಿಕೆ ಶಿವಕುಮಾರ್ ಬಳಿಕ ಮಾಧ್ಯಮದ ಜೊತೆ ಅಂತ್ಯಸಂಸ್ಕಾರ ವ್ಯವಸ್ಥೆ ಕುರಿತು ಮಾತನಾಡಿದ್ದಾರೆ. ಇದೇ ವೇಳೆ ನಾಳೆ(ಡಿ.11) ರಾಜ್ಯಾದ್ಯಂತ ರಜೆ ಘೋಷಣೆ ಮಾಡಿದ್ದಾರೆ. ಮೂರು ದಿನಗಳ ಕಾಲ ಕರ್ನಾಟಕದಲ್ಲಿ ಶೋಕಾಚರಣೆ ಇರಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಎಸ್ಎಂ ಕೃಷ್ಣ ವಿಧಿವಶರಾದ ಬೆನ್ನಲ್ಲೇ ಹುಟ್ಟೂರಾಗಿರುವ ಮಂಡ್ಯ ಜಿಲ್ಲೆಯಲ್ಲಿ ಸ್ಥಳೀಯ ಜಿಲ್ಲಾಡಳಿತ ರಜೆ ಘೋಷಣೆ ಮಾಡಿತ್ತು. ಇದೀಗ ಸರ್ಕಾರ ಅಧಿಕೃತವಾಗಿ ರಾಜ್ಯಾದ್ಯಂತ ರಜೆ ಘೋಷಣೆ ಮಾಡಿದೆ. 

ಮೂರು ದಿನ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳಿರುವುದಿಲ್ಲ ಹಾಗೇ ರಾಜ್ಯದ ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನ‌ ಅರ್ಧ ಮಟ್ಟದಲ್ಲಿ ಹಾರಿಸಲಾಗುತ್ತೆ.