ಧಾರವಾಡಕ್ಕೆ ಆಗಮಿಸಿದ ರಾಜ್ಯಪಾಲ ಗೆಹ್ಲೋಟ್

ಧಾರವಾಡಕ್ಕೆ ಆಗಮಿಸಿದ ರಾಜ್ಯಪಾಲ ಗೆಹ್ಲೋಟ್

ಧಾರವಾಡ: ನಾಳೆ ನಡೆಯಲಿರುವ ಧಾರವಾಡದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಇಂದೇ ಧಾರವಾಡಕ್ಕೆ ಆಗಮಿಸಿದ್ದಾರೆ. 

ಬಳ್ಳಾರಿಯ ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಕಾರ್ಯಕ್ರಮ ಮುಗಿಸಿಕೊಂಡು ನೇರವಾಗಿ ಧಾರವಾಡಕ್ಕೆ ಬಂದ ರಾಜ್ಯಪಾಲರು ಧಾರವಾಡ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಹೂಡಿದ್ದಾರೆ. ಧಾರವಾಡದಿಂದಲೇ ಪ್ರಧಾನಮಂತ್ರಿಗಳ ವೀಡಿಯೋ ಕಾನ್ಫರನ್ಸ್ ಮೀಟಿಂಗ್‌ನಲ್ಲಿ ರಾಜ್ಯಪಾಲರು ಭಾಗಿಯಾಗಲಿದ್ದಾರೆ. 

ಶನಿವಾರ ಬೆಳಿಗ್ಗೆ 11ಕ್ಕೆ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲಿರುವ ರಾಜ್ಯಪಾಲರು, ಅಲ್ಲಿಂದ ನೇರವಾಗಿ ಹುಬ್ಬಳ್ಳಿಯ ಪ್ರವಾಸಿ ಮಂದಿರಕ್ಕೆ ತೆರಳಲಿದ್ದಾರೆ.