ರಾಜ್ಯಪಾಲ ಥಾವರ ಚಂದ್ ಗೆಹಲೋತ್‌ ಅವರಿಗೆ 'ಕೋವಿಡ್‌ ಪಾಸಿಟಿವ್'

ರಾಜ್ಯಪಾಲ ಥಾವರ ಚಂದ್ ಗೆಹಲೋತ್‌ ಅವರಿಗೆ 'ಕೋವಿಡ್‌ ಪಾಸಿಟಿವ್'

ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರ ಚಂದ್ ಗೆಹಲೋತ್‌ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 
ಕ್ವಾರಂಟೈನ್‌ನಲ್ಲಿರುವ ಗೆಹಲೋತ್‌ ಅವರ ಆರೋಗ್ಯ ಸ್ಥಿರವಾಗಿದೆ ಎಂದು ರಾಜಭವನದ ಕಾರ್ಯದರ್ಶಿ ಆರ್.ಪ್ರಭು ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಮುಂದಿನ ದಿನಾಂಕದವರೆಗೆ ರಾಜ್ಯಪಾಲರ ನಿಗದಿತ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ ಎಂದು ಪ್ರಭು ಶಂಕರ್ ಮಾಹಿತಿ ನೀಡಿದ್ದಾರೆ.